ಬೆಂಗಳೂರು, ಮೇ.5(DaijiworldNews/AK): ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಯಾಗಿರುವ ಎಚ್.ಡಿ.ರೇವಣ್ಣ ಅವರನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲು ಎಸ್ಐಟಿ ಅಧಿಕಾರಿಗಳು ಮುಂದಾದರು.ಇದಕ್ಕೂ ಮುನ್ನ ಅವರನ್ನು ವೈ ದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಎಸ್ಐಟಿ ಕಚೇರಿಯಿಂದ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ವಾಹನದಲ್ಲಿ ಕರೆತರಲಾಯಿತು. ಆಸ್ಪತ್ರೆಗೆ ಹೋಗುವ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರೇವಣ್ಣ, ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ. ರಾಜಕೀಯ ಷಡ್ಯಂತ್ರ ಇದರ ಹಿಂದಿದೆ ಎಂದರು.
ವೈದ್ಯಕೀಯ ಪರೀಕ್ಷೆ ಬಳಿಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯದರು.