ಕೋಲ್ಕತಾ, ಮೇ.6(DaijiworldNews/AA): ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು, ಪ್ರಕರಣ ಸಂಬಂಧ ಪೊಲೀಸರು ಸಮನ್ಸ್ ನೀಡಿದರೆ ಅದನ್ನು ನಿರ್ಲಕ್ಷಿಸಿ ಎಂದು ರಾಜಭವನ ಸಿಬ್ಬಂದಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬೋಸ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಪಾಲರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಲು ಬರುವುದಿಲ್ಲ. ಪ್ರಕರಣದ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದು, ಅವರು ರಾಜಭವನದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿಯಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ತನಿಖಾ ತಂಡವು ರಾಜಭವನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಉದ್ದೇಶಿಸಿದೆ ಎಂದು ವರದಿಯಾಗಿದೆ ಎಂದು ಹೇಳಿದ್ದಾರೆ.