ನವದೆಹಲಿ, ಮೇ.7(DaijiworldNews/AK):ಕರ್ನಾಟಕ ಬಿಜೆಪಿಯ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಚುನಾವಣಾ ಆಯೋಗವು ಟ್ವಿಟರ್ ಗೆ ಸೂಚಿಸಿದೆ.
ಈ ಹಿಂದೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಆದೇಶ ನೀಡಿದ ನಂತರವೂ ಪಕ್ಷವು ಅದನ್ನು ತೆಗೆದುಹಾಕದ ಕಾರಣ ನೇರವಾಗಿ ಎಕ್ಸ್ ಗೆ ಸೂಚಿಸಲಾಗಿದೆ.ಆಕ್ಷೇಪಾರ್ಹ ಪೋಸ್ಟ್ ಕುರಿತು ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಪೋಸ್ಟ್ ಅನ್ನು ಇನ್ನೂ ತೆಗೆದುಹಾಕಲಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದಾದ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಮೀಸಲಾತಿ ಮತ್ತು ನಿಧಿ ಹಂಚಿಕೆಯಲ್ಲಿ ಹಿಂದುಳಿದ ವರ್ಗಗಳಿಗಿಂತ ವಿರೋಧ ಪಕ್ಷವು ಮುಸ್ಲಿಮರಿಗೆ ಒಲವು ತೋರುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿರುದ್ಧ ವಿಡಿಯೋದಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿತ್ತು.
ವೀಡಿಯೊವು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಪೊಲೀಸರು ಮತ್ತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.