ಬೆಂಗಳೂರು, ಮೇ.8(DaijiworldNews/AK): ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್ಡಿಕೆ ಹಾಜರಾಗಿದ್ದರು. ಈ ವೇಳೆ ರೇವಣ್ಣ, ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ಮಾತನಾಡಿದ ಅವರು, ಎಸ್ಐಟಿ ರಚನೆ ಆಗಿದೆ. ಗೃಹ ಸಚಿವರಿಗೆ ಪ್ರಶ್ನೆ ಮಾಡ್ತೀನಿ. ನಿಮ್ಮ ತನಿಖೆ ರೇವಣ್ಣ, ಪ್ರಜ್ವಲ್ ಮೇಲೆ ಯಾಕೆ ಟಾರ್ಗೆಟ್ ಆಗಿದೆ. ವೀಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡ್ತಾ ಇಲ್ಲ. ಮಹಿಳಾ ಆಯೋಗ ಕೂಡ ಪತ್ರ ಬರೆದಿದೆ. ವೀಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಅಂತ. ಆದರೆ ಇದುವರೆಗೂ ಏನು ಮಾಡಿಲ್ಲ ಎಂದು ಗುಡುಗಿದರು.
14 ವರ್ಷದ ಕೆಲಸದಲ್ಲಿ ಇದ್ದವನು ಪ್ರಜ್ವಲ್ ನಡವಳಿಕೆ ಗೊತ್ತಿದ್ರೆ ಕೆಲಸ ಬಿಡಬೇಕಿತ್ತು. ಬಂಡೆ ರಕ್ಷಣೆ ಕೊಡುತ್ತೆ ಅಂತ ಕಾರ್ತಿಕ್ ಅಂದುಕೊಂಡಿದ್ದಾನೆ. ಬಂಡೆ ಹೇಗೆ ರಕ್ಷಣೆ ಮಾಡುತ್ತೆ ಅಂತ ಕಾಯ್ತಾ ಇದ್ದಾನೆ ಎಂದು ತಿರುಗೇಟು ನೀಡಿದರು.
ರೇವಣ್ಣಗೆ ಮಾತ್ರ ನೋಟಿಸ್ ಕೊಟ್ಟಿದ್ದಾರೆ. ನವೀನ್, ಕಾರ್ತಿಕ್, ಶ್ರೇಯಸ್ಗೆ ನೋಟಿಸ್ ಕೊಟ್ಟಿಲ್ಲ. ಕುಮಾರಸ್ವಾಮಿ ಬ್ಲ್ಯಾಕ್ಮೇಲರ್ ಅಲ್ಲ. ಡಿಕೆ ಸಂಸ್ಕೃತಿ ಎಲ್ಲರಿಗೂ ಗೊತ್ತಾಗಿದೆ. ಡಿಕೆ, ದೇವರಾಜೇಗೌಡ ಜೊತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಕೆಲಸ ಡಿಕೆ? 5 ಜನ ಇಟ್ಟುಕೊಂಡಿದ್ದೀನಿ ಅಂತ ಹೇಳಿದ್ದೀಯ ನೀನು. ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದ್ಯಾ? ಪರಮೇಶ್ವರ ನಿಮಗೆ ಬೆನ್ನುಮೂಳೆ ಇದ್ಯಾ? ಹಿಟ್ & ರನ್ ಅಂತಾರೆ ಕುಮಾರಸ್ವಾಮಿನಾ? ಎಸ್ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಇದ್ಯಾ? ಯಾವ ಪ್ರಕರಣ ಕೂಡ ತಾರ್ಕಿಕವಾಗಿ ಅಂತ್ಯ ಮಾಡಿಲ್ಲ ಎಂದು ಗರಂ ಆದರು.