ಬೆಂಗಳೂರು, ಮೇ 9 (DaijiworldNews/MS): 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ (92.12%),ಎರಡನೇ ಸ್ಥಾನ ಹಾಗೂ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, 2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್ ಆಗಿದ್ದಾರೆ. ಈ ಮೂಲಕ SSLC ಪರೀಕ್ಷೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದು.
ಬಾಗಲಕೋಟೆಯ ಮುಧೋಳದ ಮೊರಾರ್ಜಿ ದೇಸಾಯಿ ಶಾಲೆಯ ಅಂಕಿತಾ ಬಸಪ್ಪ (೬೨೫ ) ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ ದ್ವಿತೀಯ(೬೨೫/೬೨೪) ಪಡೆದುಕೊಂಡಿದ್ದಾರೆ.