ಶ್ರೀನಗರ, ಮೇ 9 (DaijiworldNews/AK): ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಎನ್ಐಎ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್ಇಟಿ ಕಮಾಂಡರ್ ಸೇರಿ ಮೂವರ ಹತ್ಯೆ ಬುಧವಾರ ರಾತ್ರಿ ನಡೆದಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.
ರೆಡ್ವಾನಿ ಪಯೀನ್ನ ನಿವಾಸಿ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೈಬಾ (ಎಲ್ಇಟಿ) ಆಫ್ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್ಎಫ್)ನ ಕಮಾಂಡರ್ ಆಗಿದ್ದ. ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದರು.ಅಹ್ಮದ್ ದಾರ್ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.