ಹಾಸನ, ಮೇ.10(DaijiworldNews/AK): ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್ಐಟಿ ತಂಡ ನೋಟಿಸ್ ನೀಡಿದೆ.
ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್ ಮತ್ತು ದೇವರಾಜೇಗೌಡಗೆ ನೋಟಿಸ್ ನೀಡಲಾಗಿದೆ.
ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ಗೌಡ ಹಾಗೂ ಚೇತನ್ಗೌಡ ವಿರುದ್ಧ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್ಐಟಿ ಕೈಗೆತ್ತಿಕೊಂಡಿದೆ.ಪ್ರಕರಣ ಸಂಬಂಧ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ನೋಟಿಸ್ ನೀಡಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ತನಿಖೆ ನಂತರ ಪೆನ್ಡ್ರೈವ್ನ ಸತ್ಯಾಸತ್ಯತೆ ಹೊರ ಬೀಳುವ ಸಾಧ್ಯತೆ ಇದೆ.