ನವದೆಹಲಿ, ಮೇ.12(DaijiworldNews/AK): ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಕೇಳಿಬಂದ ಎರಡು ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬೆದರಿಕೆಯ ಇಮೇಲ್ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿ ಪೊಲೀಸರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಸಿಐಎಸ್ಎಫ್ ಸಿಬ್ಬಂದಿಯನ್ನ ಅಲರ್ಟ್ ಆಗಿದ್ದಾರೆ ಎಂದು ಇರಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ