ದೆಹಲಿ, ಮೇ.13(DaijiworldNews/AA): ಅರವಿಂದ್ ಕೇಜ್ರಿವಾಲ್ ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮದ್ಯನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿರುವುದರಿಂದ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅರ್ಹರಲ್ಲ. ಹೀಗಾಗಿ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.
ಇದೀಗ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ, ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಜ್ರಿವಾಲ್ ಅವರನ್ನು ಕೇಳುವ ಯಾವುದೇ ಕಾನೂನು ಹಕ್ಕಿಲ್ಲ ಎಂದು ತಿಳಿಸಿದೆ. ಈ ಬಗ್ಗೆ ಅರ್ಜಿ ಸಲ್ಲಿಸಿದ್ದ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಛೀಮಾರಿ ಹಾಕಿ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಿತ್ತು. ಜೊತೆಗೆ ನ್ಯಾಯಾಂಗ ವ್ಯವಸ್ಥೆಯನ್ನು ಗೇಲಿ ಮಾಡಬೇಡಿ ಎಂದು ಎಚ್ಚರಿಕೆ ನೀಡಿತ್ತು.