ಪಾಟ್ನಾ, ಮೇ.13(DaijiworldNews/AK): ಪ್ರಧಾನಿ ನರೆಂದ್ರ ಮೋದಿಯವರು ಚುನಾವಣಾ ಪ್ರಚಾರದ ಎರಡನೇ ದಿನವಾದ ಇಂದು ಗುರುದ್ವಾರ ಪಾಟ್ನಾ ಸಾಹಿಬ್ಗೆ ಭೇಟಿ ನೀಡಿದರು.ಸಾಂಪ್ರದಾಯಿಕ ಕುರ್ತಾ, ಕೇಸರಿ ಸಿಖ್ ಪೇಟ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಗುರುದ್ವಾರಕ್ಕೆ ಬಂದಿದ್ದ ಭಕ್ತರಿಗೆ ವಿಶೇಷ ಪ್ರಸಾದ ತಯಾರಿಸಿ, ಬಡಿಸಿದ್ದಾರೆ.
ನಂತರ ಗುರುದ್ವಾರದಲ್ಲಿ ಕರಃ ಪ್ರಸಾದವನ್ನು ತೆಗೆದುಕೊಂಡ ಮೋದಿ ಈ ವೇಳೆ ಡಿಜಿಟಲ್ ಪಾವತಿ ವಿಧಾನ ಬಳಸಿ ಹಣ ಸಂದಾಯ ಮಾಡಿದರು. ಇಂದು ಹಾಜಿಪುರ, ಮುಜಾಫರ್ಪುರ ಮತ್ತು ಸರನ್ನಲ್ಲಿ ಎನ್ಡಿಎ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿ ನಡೆಸಿ ಮೋದಿ ಮಾತನಾಡಲಿದ್ದಾರೆ.
ತಖತ್ ಶ್ರೀ ಪಾಟ್ನಾ ಸಾಹಿಬ್ನ್ನು ತಖತ್ ಶ್ರೀ ಹರಿಮಂದಿರ್ ಜಿ, ಪಾಟ್ನಾ ಸಾಹಿಬ್ ಎಂದು ಸಹ ಕರೆಯುತ್ತಾರೆ. ಇದು ಪಾಟ್ನದಲ್ಲಿರುವ ಸಿಖ್ಖರ ಐದು ತಖತ್ಗಳಲ್ಲಿ ಒಂದಾಗಿದೆ. ಗುರು ಗೋಬಿಂದ್ ಸಿಂಗ್ ಅವರ ಜನ್ಮಸ್ಥಳವನ್ನು ಗುರುತಿಸಲು 18 ನೇ ಶತಮಾನದಲ್ಲಿ ಮಹಾರಾಜ ರಂಜಿತ್ ಸಿಂಗ್ ಈ ತಖತ್ ನಿರ್ಮಿಸಿದ್ದರು.