ಬೆಂಗಳೂರು, ಮೇ.13(DaijiworldNews/AA): ಲೋಕಸಭಾ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದ್ದು, ಮೈತ್ರಿ ಸರ್ಕಾರ ಬರಲಿದೆ. ಎನ್ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗುತ್ತಿದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಏಕನಾಥ ಶಿಂಧೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಏಕನಾಥ ಶಿಂಧೆ ಅವರ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಸರ್ಕಾರ ಚುನಾವಣೆ ಬಳಿಕ ಪತನವಾಗಬಹುದು. ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ. ಅವರ ಸರ್ಕಾರದ ಬಗ್ಗೆ ಅವರಿಗೆ ಅನಮಾನವಿದೆ. ಚುನಾವಣೆಯಾದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂಬ ಅನುಮಾನವಿದೆ. ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ ಎಂದರು.
ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ನಮಗೆ ಯಾವ ಭಯವೂ ಇಲ್ಲ. ಮಹಾರಾಷ್ಟ್ರದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಳಿಕ ನಮ್ಮ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತದೆ ಎಂದು ಹೇಳಿದರು.