ದೆಹಲಿ, ಮೇ. 14(DaijiworldNews/AA): ಬಾಬಾ ರಾಮ್ದೇವ್, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ಬಾಬಾ ರಾಮ್ದೇವ್ ಅವರ ಮೇಲೆ ದೇಶದ ಜನರಿಗೆ ನಂಬಿಕೆ ಇದೆ. ಅವರು ಅದನ್ನು ಹೆಚ್ಚು ಬುದ್ಧಿವಂತಿಕೆಯಿಂದ ಬಳಸಬೇಕು. ಅವರ ಸ್ಥಾನಮಾನವನ್ನು ಸಕಾರಾತ್ಮಕವಾಗಿ ಬೆಳೆಸಿಕೊಳ್ಳಬೇಕು ಎಂದು ಸುಪ್ರೀಂ ಸಲಹೆ ನೀಡಿದೆ.
ರಾಮ್ ದೇವ್ ಅವರು ಯೋಗ ಬಗ್ಗೆ ಮಾಡಿದ ಕೆಲಸ ಬಗ್ಗೆ ಹೆಮ್ಮೆಪಡುತ್ತೇವೆ. ಜನರು ಅವರನ್ನು ನೋಡುತ್ತಿರುತ್ತಾರೆ. ಅಂಥದನ್ನು ಅವರು ಸಕಾರಾತ್ಮಕವಾಗಿ ಬಳಸಬೇಕು ಮತ್ತು ಅವರು ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಇನ್ನು ಆನ್ಲೈನ್ ಪ್ಲಾಟ್ಫಾರ್ಮ್ಗಳಿಂದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಹಿಂಪಡೆದಿದ್ದಾರೆ. ಪರವಾನಗಿಗಳನ್ನು ರದ್ದುಗೊಳಿಸಿರುವ ಉತ್ಪನ್ನಗಳ ಮಾರಾಟವನ್ನು ಕೂಡ ನಿಲ್ಲಿಸಲಾಗಿದೆ ಎಂದು ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಪರ ವಕೀಲರು ಕೋರ್ಟ್ ಗೆ ತಿಳಿಸಿದ್ದಾರೆ. ಹೀಗಾಗಿ ತನ್ನ ಆದೇಶಗಳನ್ನು ಕಾಯ್ದಿರಿಸಿದ ಸುಪ್ರೀಂ, ಪರವಾನಗಿಯನ್ನು ರದ್ದುಗೊಳಿಸಿರುವ ಉತ್ಪನ್ನಗಳ ಜಾಹೀರಾತುಗಳನ್ನು ಔಷಧಗಳನ್ನು ಹಿಂಪಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸೂಚಿಸುವ ಅಫಿಡವಿಟ್ ಅನ್ನು ಸಲ್ಲಿಸಬೇಕು ಎಂದು ಸೂಚಿಸಿದೆ.