ನವದೆಹಲಿ, ಮೇ 20(DaijiworldNews/AA): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಈ ದುಃಖದ ಸಮಯದಲ್ಲಿ ಭಾರತವು ಇರಾನ್ನೊಂದಿಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇರಾನ್ ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರು ಎಂದಿಗೂ ನಮ್ಮ ಮನಸ್ಸಿನಲ್ಲಿ ಇರುತ್ತಾರೆ. ಇರಾನ್ ನ ಜನರು ಈ ದುಃಖದ ಸಮಯದಲ್ಲಿ ಇರಾನ್ನೊಂದಿಗೆ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಭಾನುವಾರ ಇಬ್ರಾಹಿಂ ರೈಸಿ ಹಾಗೂ ಅಧಿಕಾರಿಗಳು ತೆರಳುತ್ತಿದ್ದ ಹೆಲಿಕಾಪ್ಟರ್ ಪರ್ವತ ಶ್ರೇಣಿಗಳ ನಡುವೆ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್ ನಲ್ಲಿದ್ದ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಮೃತಪಟ್ಟಿದ್ದಾರೆ.