ತಿರುವನಂತಪುರಂ, ಮೇ 21 (DaijiworldNews/AA): ಕೇರಳದಲ್ಲಿ ಭಾರೀ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಅತೀ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ ಸೇರಿದಂತೆ ೮ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಪಾಲಕ್ಕಾಡ್, ಕೋಯಿಕ್ಕೋಡ್, ಕಣ್ಣೂರು, ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.
ಮಳೆಯಿಂದಾಗಿ ಭಾರೀ ಉಂಟುಮಾಡುವ ಕಾರಣ, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ)ವು ಜನರಿಗೆ ಜಾಗರೂಕರಾಗಿರಲು ಸಲಹೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇದರಿಂದರಿಂದಾಗಿ ಭೂಕುಸಿತ ಮತ್ತು ಮಣ್ಣು ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಕಚೇರಿಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.