ಬೆಂಗಳೂರು, ಮೇ.22 (DaijiworldNews/AA): ಫೋನ್ ಟ್ಯಾಪಿಂಗ್ ನಂತಹ ನೀಚ ಕೆಲಸವನ್ನು ತಾನಾಗಲೀ ತಮ್ಮ ಕಾಂಗ್ರೆಸ್ ಸರ್ಕಾರವಾಗಲೀ ಹಿಂದೆ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋನ್ ಕದ್ದಾಲಿಕೆಯಂಥ ನೀಚ ಕೆಲಸವನ್ನು ತಮ್ಮ ನಂತರ ಮುಖ್ಯಮಂತ್ರಿಯಾಗುವವರು ಸಹ ಮಾಡಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಮಾರಸ್ವಾಮಿಯವರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮ ರಾಜಕೀಯ ಜೀವನದಲ್ಲಿ ಯಾವತ್ತು ಫೋನ್ ಟ್ಯಾಪಿಂಗ್ ಮಾಡೋ ನೀಚ ಕೆಲಸ ಮಾಡಿಲ್ಲ. ಈಗಲೂ ಮಾಡಿಲ್ಲ, ಹಿಂದೆ ಸಿಎಂ ಆಗಿದ್ದಾಗಲೂ ಮಾಡಿಲ್ಲ. ಇಲ್ಲಿಯವರೆಗೂ ನಾನು ಅಂತಹ ಕೆಲಸ ಮಾಡಿಲ್ಲ ಮುಂದೆ ಮಾಡುವುದಿಲ್ಲ ಎಂದರು.
ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರ ನಮ್ಮ ಕುಟುಂಬವರ ಫೋನ್ ಟ್ಯಾಪ್ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಇದೀ ಸಿಎಂ ಸಿದ್ದರಾಮಯ್ಯ ಅವರು ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.