ಚಂಡೀಗಢ, ಇಮೇ 26 (DaijiworldNews/AK):ಇದುವರೆಗೆ ವರ್ಕ್ ಫ್ರಂ ಹೋಮ್ ಬಗ್ಗೆ ಗೊತ್ತಿತ್ತು. ಆದರೆ, ಇದೇ ಮೊದಲ ಸಲ 'ವರ್ಕ್ ಫ್ರಂ ಜೈಲ್' ಬಗ್ಗೆ ಕೇಳುತ್ತಿದ್ದೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಕಾಲೆಳೆದಿದ್ದಾರೆ.
ಫತೇಗಢ ಸಾಹಿಬ್ ಲೋಕಸಭಾ ಕ್ಷೇ ತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೆಜ್ಜ ರಾಮ್ ವಾಲ್ಮೀಕಿ ಪರ ಖನ್ನಾದಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿ, ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿದೆ ಎಂತಹ ಆಡಳಿತ ನೀಡುತ್ತಿದೆ ಎಂ ಬ ಬಗ್ಗೆ ನಾನೇನು ಹೆಚ್ಚು ಹೇಳಬೇಕಾಗಿಲ್ಲ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.
ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಕೇಜ್ರಿವಾಲ್,
ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದಾರೆ. ಈ ಕುರಿತು ಮಾತನಾಡಿರುವ ಸಿಂಗ್, ದೆಹಲಿಯಲ್ಲಿಯೂ ಎಎಪಿ ಸರ್ಕಾರವಿದೆ. ಆದರೆ ಆ ಪಕ್ಷದ ನಾಯಕ ಅಬಕಾರಿ
ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದರು.
ಯಾವುದೇ ನಾಯಕ ತಮ್ಮ ವಿರುದ್ಧ ಆರೋಪಗಳು ಕೇಳಿ ಬಂದರೆ, ಇತ್ಯರ್ಥ ವಾಗುವವರೆಗೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ನೈತಿಕ ಸ್ಥೈರ್ಯ ಹೊಂದಿರಬೇಕು.ಅದೇ ನೈತಿಕತೆ ಎಂದು ಕೇಜ್ರಿವಾಲ್ ಪ್ರತಿಪಾದಿಸುತ್ತಾರೆ. ಆದರೆ, ಅಬಕಾರಿ ಹಗರಣದಲ್ಲಿ ಸ್ವತಃ ಜೈಲಿಗೆ ಸೇರಿದಾಗ, ತಾವು ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಮತ್ತು ಜೈಲಿನಿಂದಲೇ ಕೆಲಸ ಮಾಡುವುದಾಗಿ ಹೇಳುತ್ತಾರೆ. ನಮಗೆ 'ವರ್ಕ್ ಫ್ರಂ ಹೋಮ್' ಬಗ್ಗೆ ಗೊತ್ತಿತ್ತು. ಅದರೆ, ಇದೇ ಮೊದಲ ಬಾರಿ 'ವರ್ಕ್ ಫ್ರಂ ಜೈಲ್' ಬಗ್ಗೆ ಕೇಳುತ್ತಿದ್ದೇನೆ' ಎಂದು ತಿರುಗೇಟು ನೀಡಿದ್ದಾರೆ.