ಅಹಮದಾಬಾದ್, ಮೇ 28(DaijiworldNews/AA): ರಾಜ್ಕೋಟ್ ಗೇಮ್ಝೋನ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಧವಲ್ ಠಕ್ಕರ್ ನನ್ನು ರಾಜಸ್ಥಾನದ ಅಬು ರಸ್ತೆಯಲ್ಲಿ ಬಂಧಿಸಲಾಗಿದೆ.
ಆರೋಪಿ ಧವಲ್ ಠಕ್ಕರ್ ರಾಜಸ್ಥಾನದ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಮೇರೆಗೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಗೇಮಿಂಗ್ ಝೋನ್ 6 ಪಾಲುದಾರರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಈ ಗೇಮಿಂಗ್ ಝೋನ್ ನನ್ನು ನಿರ್ವಹಿಸುತ್ತಿದ್ದ ರೇವೇ ಎಂಟರ್ಪ್ರೈಸಸ್ ಇಬ್ಬರು ಪಾಲುದಾರರಾದ ಯುವರಾಜ್ಸಿಂಹ ಸೋಲಂಕಿ ಮತ್ತು ರಾಹುಲ್ ರಾಥೋಡ್ ಮತ್ತು ವ್ಯವಸ್ಥಾಪಕ ನಿತಿನ್ ಜೈನ್ನನ್ನು ಇಂದು ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮೂವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ಗೇಮಿಂಗ್ ಝೋನ್ನ ದಾಖಲೆಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ ಎಂದು ತಿಳಿಸಿದ್ದಾರೆ. ಸರ್ಕಾರ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಎಸ್ಐಟಿ ತಂಡ ರಚಿಸಿದೆ. ಈ ತಂಡವು ಗೇಮಿಂಗ್ ಝೋನ್ಗೆ ಸಂಬAಧಿಸಿದ ಎಲ್ಲಾ ಫೈಲ್ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.