ಪಶ್ಚಿಮ ಬಂಗಾಲ, ಮೇ.11(Daijiworld News/SS): ಮೋದಿ ಈಗ ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ, ಅಂತೆಯೇ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲುವುದು ಖಚಿತವಿದೆ ಎಂದು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕಳೆದ ಐದು ಹಂತದ ಲೋಕಸಭಾ ಚುನಾವಣೆಯಲ್ಲಿ ಕಳಪೆ ನಿರ್ವಹಣೆ ತೋರಿ ಸೋಲಿನ ಭೀತಿಯಲ್ಲಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈಗ ಪಶ್ಚಿಮ ಬಂಗಾಲದ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.
ಕೆಲವೊಂದು ಬೆಳವಣಿಗೆಗಳನ್ನು ನೋಡುವಾಗ ಮೋದಿ ಈಗ ಆತ್ಮವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ, ಅಂತೆಯೇ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋಲುವುದು ಖಚಿತವಿದೆ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆಯನ್ನೇರುವ ಅಗತ್ಯದ ನಂಬರ್ ಎಲ್ಲಿಂದ ಬರುತ್ತದೆ….? ಉತ್ತರ ಪ್ರದೇಶದಲ್ಲಿ ಅದರ ಬಲ 73ರಿಂದ 13 ಅಥವಾ 17ಕ್ಕೆ ಇಳಿಯಲಿದೆ. ಆಂಧ್ರ ಪ್ರದೇಶ, ಕೇರಳ, ಪಶ್ಚಿಮ ಬಂಗಾಲ, ತಮಿಳು ನಾಡು, ರಾಜಸ್ಥಾನ, ಪಂಜಾಬ್ ಮತ್ತು ಒಡಿಶಾಗಳಲ್ಲಿ ಬಿಜೆಪಿಯದ್ದು ಶೂನ್ಯ ಸಂಪಾದನೆ ಆಗಲಿದೆ. ಮಧ್ಯಪ್ರದೇಶದಲ್ಲಿ ಅದರ ಬಲ ಕಡಿಮೆಯಾಗಲಿದೆ ಎಂದು ತಿಳಿಸಿದರು.