ಬೆಂಗಳೂರು, ಜೂ. 08(DaijiworldNews/AA): ಬಿಜೆಪಿ ನಾಯಕರು ಹೇಳಿದ್ದಾರೆ ಅಂತ ಶರಣಪ್ರಕಾಶ್ ಪಾಟೀಲ್ ದೋಷಿಯಾಗಲ್ಲ. ಎಸ್ಐಟಿ ತನಿಖೆ ನಡೆಸುತ್ತಿದೆ. ಎಲ್ಲಾ ಅಂಶಗಣನ್ನು ಅವರು ಪರಾಮರ್ಶೆ ಮಾಡುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೊಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಅವರ ಹೆಸರು ಮುನ್ನಲೆಗೆ ಬಂದಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ತನಿಖೆ ನಡೆಯುವಾಗ ಕ್ರಾಸ್ ರೆಫರೆನ್ಸ್ ಗಳು ಬರುತ್ತಿರುತ್ತವೆ, ಹಾಗೆಂದ ಮಾತ್ರಕ್ಕೆ ಶರಣಪ್ರಕಾಶ್ ಪಾಟೀಲ್ ಆರೋಪಿಯಾಗಲ್ಲ. ಎಸ್ಐಟಿ ತನಿಖೆ ಜಾರಿಯಲ್ಲಿರುವಾಗ ಕಾಮೆಂಟ್ ಮಾಡೋದು ಸರಿಯಲ್ಲ ಎಂದರು.
ಲೋಕಸಭಾ ಚುನಾವಣೆ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆಯಾಗಿರುವುದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಲಾಗುತ್ತಿದೆ. ಹೈಕಮಾಂಡ್ ರಾಜ್ಯದ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದೆ. ಅವುಗಳನ್ನು ಅನುಸರಿಲಾಗವುದು ಎಂದು ತಿಳಿಸಿದರು.