ಬೆಂಗಳೂರು, ಜೂ. 10 (DaijiworldNews/AA):ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು(ಜೂನ್ 10) ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಪ್ರಜ್ವಲ್ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಇಷ್ಟು ದಿನ ಎಸ್ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಇಂದಿನಿಂದ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.