ಬೆಂಗಳೂರು, ಜೂ 14 (DaijiworldNews/ AK): ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.
ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ.
ಯಡಿಯೂರಪ್ಪ ಪರ ವಾದ ಮಂಡಿಸಿದ ವಕೀಲ ನಾಗೇಶ್, ಲೈಂಗಿಕ ದೌರ್ಜನ್ಯ ಪ್ರಕರಣ ಜಾಮೀನು ಸಹಿತ ಪ್ರಕರಣ. ಜಾಮೀನು ನೀಡಬಹುದಾದ ಪ್ರಕರಣ. ಪ್ರಕರಣದಲ್ಲಿ ಆರೋಪಿಗೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಬಹುದು. 7 ವರ್ಷದ ಕೆಳಗೆ ಶಿಕ್ಷೆ ಇರುವ ಪ್ರಕರಣ ಇದು. ಇದರಲ್ಲಿ ಬಂಧನದ ಅನಿವಾರ್ಯತೆ ಇಲ್ಲ ಎಂದು ಹೇಳಿದರು.