ಬೆಂಗಳೂರು , ಜೂ. 19(DaijiworldNews/AK): ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, "ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆ ಮೂಲಕ ಈ ಭಾಗ ನನಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು ಎಂದರು.
ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ ಎಂದರು.
ಹೀಗಾಗಿ ಇಂದು ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.