ನವದೆಹಲಿ, ಜೂ. 19(DaijiworldNews/AA): ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಕೇಜ್ರೀವಾಲ್ ಅವರಿಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನಲೆ ಅವರು ಮೇ 10ರಂದು ಜೂಲಿನಿಂದ ಹೊರಗೆ ಬಂದಿದ್ದರು. ಜೈಲಿನಿಂದ ಹೊರಬಂದ ಅವರು ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಧ್ಯಂತರ ಜಾಮೀನು ಅವಧಿ ಮುಕ್ತಾಯವಾದ ಹಿನ್ನಲೆ ಜೂನ್ 2ರಂದು ಮತ್ತೆ ತಿಹಾರ್ ಜೈಲಿಗೆ ತೆರಳಿದ್ದರು.
ದೆಹಲಿ ಅಬಕಾರಿ ನೀತಿ ಜಾರಿ ವೇಳೆ ಭಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾರ್ಚ್ 21ರಂದು ಇಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಇದೀಗ ಮತ್ತೆ ಕೇಜ್ರಿವಾಲ್ರ ನ್ಯಾಯಾಂಗ ಬಂಧನ ವಿಸ್ತರಿಸುವ ಮೂಲಕ ಅವರಿಗೆ ಸದ್ಯಕ್ಕೆ ರಿಲೀಫ್ ಇಲ್ಲದಂತಾಗಿದೆ.