ಬೆಂಗಳೂರು, ಜೂ. 19(DaijiworldNews/AA): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 3 ನೇ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಎಸ್ಐಟಿ ಪ್ರಜ್ವಲ್ರನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಈಗಾಗಲೇ 2 ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಇದೀಗ 3 ನೇ ಪ್ರಕರಣದಲ್ಲಿ ಮತ್ತೆ ಪ್ರಜ್ವಲ್ರನ್ನು ಎಸ್ಐಟಿ ಕಸ್ಟಡಿಗೆ ಪಡೆದುಕೊಂಡಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನ ಆಧಾರದ ಮೇರೆಗೆ ಇದೀಗ ಪ್ರಜ್ವಲ್ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪ್ರಜ್ವಲ್ ರೇವಣ್ಣ ಅವರನ್ನು 2ನೇ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ಕೋರ್ಟ್ ನಿನ್ನೆಯಷ್ಟೇ ಆದೇಶ ನೀಡಿತ್ತು. ಈ ಆದೇಶದಂತೆ ಪ್ರಜ್ವಲ್ರನ್ನು ಜೈಲಿಗೆ ಕಳುಹಿಸಲಾಗಿತ್ತು.
ಇನ್ನು ಪ್ರಜ್ವಲ್ ರೇವಣ್ಣ ಅವರು ಜಾಮಿನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಜೂನ್ 24ಕ್ಕೆ ಮುಂದೂಡಿಕೆಯಾಗಿದೆ. ಈ ನಡುವೆ ಇಂದು ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಪ್ರಕರಣದಲ್ಲಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.