ನವದೆಹಲಿ, ಜೂ 20 (DaijiworldNews/ AK): ರಷ್ಯಾ ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ಆರ್ಎಸ್ಎಸ್ ವಶಪಡಿಸಿಕೊಂಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ವಿ.ವಿ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿಲ್ಲ ನಿರ್ದಿಷ್ಟ ಸಂಸ್ಥೆ ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಈ ಸಂಘಟನೆ ಮತ್ತು ಬಿಜೆಪಿ ಸೇರಿ ನಮ್ಮ ಶಿಕ್ಷಣ ವ್ಯವಸ್ಥೆಗೆ ನುಗ್ಗಿ ನಾಶ ಮಾಡುತ್ತಿದೆ. ನೋಟು ಅಮಾನ್ಯೀಕರಣದ ಮೂಲಕ ಆರ್ಥಿಕತೆ ನಾಶ ನರೇಂದ್ರ ಮೋದಿ ಈಗ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಮೋದಿ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ದೇಶದಲ್ಲಿ ಏನಾದರೂ ಆಗಲಿ ಅವರಿಗೆ ಸರ್ಕಾರ ಉಳಿಯಬೇಕು ಎನ್ನುವಂತಾಗಿದೆ.ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಸಂಸತ್ ನಲ್ಲಿ ಪ್ರಸ್ತಾಪಿಸಲಾಗುವುದು. ಸೂಕ್ತ ಕಾನೂನು ಜಾರಿಯಾಗಬೇಕಿದೆ. ಅದಕ್ಕೂ ಮುನ್ನ ಬಿಜೆಪಿ ಮಾತೃಸಂಸ್ಥೆ ಕಪಿ ಮುಷ್ಠಿಯಿಂದ ಶಿಕ್ಷಣ ವ್ಯವಸ್ಥೆಯನ್ನು ಹೊರ ತರಬೇಕಿದೆ. ಭಾರತ್ ಜೋಡೋ ಯಾತ್ರೆ ವೇಳೆ ಸಾಕಷ್ಟು ಯುವಕರು ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ದೂರಿದ್ದಾರೆ ಎಂದು ಹೇಳಿದರು.