ನವದೆಹಲಿ, ಜೂ 20 (DaijiworldNews/ AK):ಡಾರ್ಕ್ನೆಟ್ನಲ್ಲಿ ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದೆ.ಯುಜಿಸಿ-ನೆಟ್ ರದ್ದುಗೊಳಿಸಿ ಕೇಂದ್ರ ಶಿಕ್ಷಣ ಸಚಿವಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ಸಿಬಿಐ ಗುರುವಾರ ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ ಕೇಂದ್ರವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳ ಬಗ್ಗೆ ತೀವ್ರ ಗೊಂದಲದ ಸೃಷ್ಟಿಸಿತ್ತು.
ನೀಟ್ ಹಗರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆ ನಡೆಸಬೇಕೆಂಬ ಆಗ್ರಹ ಸಹ ಕೇಳಿಬರುತ್ತಿದೆ. ಇದೀಗ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಬಂಧಿಸಿರುವ ವಿದ್ಯಾರ್ಥಿ ಅನುರಾಗ್ ಯಾದವ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಇದೇ ಹೊತ್ತಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಕಿಂಗ್ಪಿನ್ ಪಾಟ್ನಾದ ಅಮಿತ್ ಆನಂದ್ ಕೂಡ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ಇವರೆಡು ಈಗ ಈಗ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಬಿಹಾರ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ತನಿಖಾ ತಂಡ ಈವರೆಗೂ 14 ಮಂದಿಯನ್ನು ಬಂಧಿಸಿದೆ.