ಬೆಂಗಳೂರು, ಜೂ 23 (DaijiworldNews/MS): ಆಯುಷ್ ಮತ್ತು ಆಲೋಪತಿ ವೈದ್ಯ ಪದ್ಧತಿಯನ್ನು ಒಂದೇ ವಿಭಾಗದಲ್ಲಿ ತರುವಂತೆ ಬೇಡಿಕೆ ಇತ್ತು. ಆದರೆ ಆಯುರ್ವೇದ ವೈದ್ಯರಿಗೆ ಅಲೋಪತಿ ಚಿಕಿತ್ಸೆ ನೀಡುವ ಅನುಕೂಲಕತೆಯನ್ನು ಕಲ್ಪಿಸಿಕೊಡಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಯೋಗ ಸಮ್ಮೇಳನವನ್ನು ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಮುಕ್ತಿದಾನಂದ, ಬೇಬಿ ಮಠದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಯೋಗ ಸಮ್ಮೇಳನ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣು, ಶಾಸಕ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ದಿನೇಶ್ ಗುಂಡೂರಾವ್, ಇಂದಿನ ಒತ್ತಡ ಜೀವನದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾನಸಿಕ ಖಿನ್ನತೆ ದೂರ ಮಾಡಲು ಯೋಗಾಭ್ಯಾಸ ಸುಲಭ ಮಾರ್ಗವಾಗಿದೆ ಎಂದು ವಿವರಿಸಿದರು.