ಬೆಂಗಳೂರು, ಜೂ.25(DaijiworldNews/AK): ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಸಚಿವ ಎಂ.ಕೆ ಉದಯನಿಧಿ ಸ್ಟಾಲಿನ್ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಸ್ಟಾಲಿನ್ ಹಾಜರಾತಿಯನ್ನು ಪರಿಗಣಿಸಿದ ಕೋರ್ಟ್, 5 ಸಾವಿರ ನಗದು ಹಾಗೂ 50 ಸಾವಿರ ಮೊತ್ತದ ಆರೋಪಿ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದೆ. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು.
2023ರ ಸೆಪ್ಟೆಂಬರ್ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.