ಮುಂಬೈ, ಜೂ.29(DaijiworldNews/AA): ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.
"ನಮ್ಮ ಮೈತ್ರಿಯನ್ನೇ ಮುಂದಿಟ್ಟುಕೊಂಡು ಸಾಮೂಹಿಕ ನಾಯಕತ್ವದಲ್ಲಿ ನಾವು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ" ಎಂದು ಶರದ್ ಪವಾರ್ ಹೇಳಿದ್ದಾರೆ.
"ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಎಂವಿಎ ಅವರನ್ನು ಮುಂದಿಟ್ಟುಕೊಂಡೇ ಲೋಕಸಭೆ ಚುನಾವಣೆಯಲ್ಲಿ ಮತಗಳನ್ನು ಪಡೆದಿದೆ" ಎಂದು ಸಂಜಯ್ ರಾವತ್ ಇತ್ತೀಚೆಗಷ್ಟೇ ತಿಳಿಸಿದ್ದರು.
ಶರದ್ ಪವಾರ್ ಅವರು ಉದ್ಧವ್ ಠಾಕ್ರೆಯನ್ನು ಸ್ವೀಕರಿಸಲು ನಿರಾಕರಿಸುವ ಮೂಲಕ ಎಂವಿಎಗೆ ಮತ್ತಷ್ಟು ಮುಜುಗರವನ್ನುಂಟು ಮಾಡಿದ್ದಾರೆ ಎನ್ನಲಾಗಿದೆ. ಹಾಗೇ ಉದ್ಧವ್ ಠಾಕ್ರೆ ಅವರನ್ನು ಕಾಂಗ್ರೆಸ್ ಕೂಡ ಮುಖ್ಯಮಂತ್ರಿಯಾಗಿ ತಿರಸ್ಕರಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಜೊತೆಗೆ ಶರದ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಸಾಮೂಹಿಕ ನಾಯಕತ್ವಕ್ಕಾಗಿ ಪ್ರತಿಪಾದಿಸಿದ್ದಾರೆ.