ಮೈಸೂರು, ಜೂ.30(DaijiworldNews/AA): ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು. ಆಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ ಎಂದಿದ್ದಾರೆ.
ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಮೇಲಿನ ಅಭಿಮಾನದಿಂದ ಅವರು ಹಾಗೆ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.
ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ. ಇದು ದೊಡ್ಡ ಅಪರಾಧ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದರೆ ಎಷ್ಟು ವರ್ಷ ಎಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.