ಬೆಂಗಳೂರು, ಜು.01(DaijiworldNews/AA): ಶಿವಕುಮಾರ್ ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಹೆಚ್ಚುವರಿ ಉಪ ಮುಖ್ಯಮಂತ್ರಿಗಳು ಬೇಕೆಂದು ಕೇಳುತ್ತಿರುವವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಸುಮಾರು 250 ಪದಾಧಿಕಾರಿಗಳನ್ನು ಕರೆಸಿ ಮಾತಾಡಲಾಗಿದೆ ಮತ್ತು ಎಲ್ಲರಿಗೂ ಅವರವರ ಜವಾಬ್ದಾರಿಗಳನ್ನು ವಹಿಸಿಕೊಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಮಾನ್ಯ ಸಭೆಯನ್ನು ಕರೆಯುವ ಮೊದಲು ಮತ್ತೆರಡು ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಈಗಾಗಲೇ ಸಚಿವ ಕೆಎನ್ ರಾಜಣ್ಣರಿಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೋಟಿಸ್ ಜಾರಿಯಾಗಿದೆ. ಶೋಕಾಸ್ ನೋಟಿಸ್ ಜಾರಿಯಾದ ನಂತರವೂ ಹೆಚ್ಚುವರಿ ಡಿಸಿಎಂಗಳು ಬೇಕೆಂದು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ.