ರಾಂಚಿ, ಜು.03(DaijiworldNews/AA): ಜಾಮೀನು ಸಿಕ್ಕ ಬೆನ್ನಲ್ಲೇ ಹೇಮಂತ್ ಸೊರೆನ್ ಅವರು ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮ ಹಣ ವರ್ಗಾವಣೆ, ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳಿಂದ ಬಂಧಿತರಾಗಿದ್ದ ಹೇಮಂತ್ ಸೊರೆನ್ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಜಾಮೀನು ಪಡೆದ ಬೆನ್ನಲ್ಲೇ ಹೇಮಂತ್ ಸೊರೆನ್ ಅವರು ಮತ್ತೆ ಜಾರ್ಖಂಡ್ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಹಾಲಿ ಸಿಎಂ ಚಂಪೈ ಸೊರೆನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಹೇಮಂತ್ ಸೊರೆನ್ ಅವರು ಮೂರನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್ ಸೊರೆನ್ ಅವರ ಬಂಧನವಾದ ನಂತರ ಅವರ ಆಪ್ತ ಚಂಪೈ ಸೊರೆನ್ ಅವರು ಫೆಬ್ರವರಿ 2ರಂದು ಜಾರ್ಖಂಡ್ ಸಿಎಂ ಆಗಿ ಅಧಿಕಾರಕ್ಕೆ ಏರಿದ್ದರು.