ಬೆಂಗಳೂರು, ಜು 04 (DaijiworldNews/ AK): ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಪತ್ನಿ ಹೆಸರಿಗೆ ನಿವೇಶನ ಹಂಚಿಕೆಯಾಗಿರುವ ಮೈಸೂರಿನ ‘ಮುಡಾ’ ಪ್ರಕರಣ ಹೊರಬರುವಲ್ಲಿ ಉಪ ಮುಖ್ಯಮಂತ್ರಿ ಕೈವಾಡವಿದೆ. ಆಗ ಸಿ.ಡಿ ಆಯಿತು, ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಆರೋ ಪ ಆಧಾರ ರಹಿತ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀ ತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದರು.