ಬೆಂಗಳೂರು, ಜು. 07(DaijiworldNews/AA): ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸಬೇಕು. ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು. ಎಳನೀರು ಮಾರಾಟಗಾರರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಬೇಕು ಎಂದು ತಿಳಿಸಿದ್ದಾರೆ.
ಆರೋಗ್ಯ ಸಿಬ್ಬಂದಿ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದ್ದಾರೆ.