ಹುಬ್ಬಳ್ಳಿ, ಜು 08 (DaijiworldNews/MS): ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಭೀಕರವಾಗಿ ಕೊಲೆಯಾದ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಭೀಕರವಾಗಿ ಹತ್ಯೆಯಾಗಿತ್ತು. ನೇಹಾಳಿಗೆ ಆಕೆಯ ಹಳೆಯ ಸಹಪಾಠಿಯಾಗಿದ್ದ ಫಯಾಜ್ ಎಂಬಾರ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ್ದ. ನೇಹಾ ಹಿರೇಮಠ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆದಿತ್ತು. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು .
ಇದೀಗ ಸಿಐಡಿ ಪೋಲೀಸರು 483 ಪುಟಗಳಷ್ಟು ದೋಷರೋಪಣ ಪಟ್ಟಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.