ಬೆಂಗಳೂರು, ಜು. 09(DaijiworldNews/AK): ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಚಿವ ರೇವಣ್ಣನವರ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಜಾಮೀನು ಅರ್ಜಿ ವಜಾ ಆಗಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂಬಂದ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.