ದೆಹಲಿ, ಜು. 13(DaijiworldNews/AA): ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಲೇ ಇರುತ್ತದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದಾರೆ.
ವಿಧಾನಸಭೆ ಉಪಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಹೆಚ್ಚಿನ ಸೀಟುಗಳಲ್ಲಿ ಗೆಲುವು ಸಾಧಿಸಿದೆ. ಈ ಕುರಿತಾಗಿ ಹೇಳಿಕೆ ನೀಡಿರುವ ಅವರು, 2014 ರ ನಂತರ ಕಾಂಗ್ರೆಸ್ ಪಕ್ಷವು ಅನುಭವಿಸಿದಂತೆಯೇ ಬಿಜೆಪಿ ಚುನಾವಣಾ ಅವನತಿಯ ಹಂತವನ್ನು ಪ್ರವೇಶಿಸುತ್ತಿದೆ. ಇದು ಲೋಕಸಭೆ ಚುನಾವಣೆಯಿಂದ ಪ್ರಾರಂಭವಾದ ಟ್ರೆಂಡ್ ಮುಂದೆ ಸಾಗುತ್ತಿದೆ ಎಂದು ಹೇಳಿದರು.
ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶನಿವಾರ ನಡೆದ ಮತಗಳ ಎಣಿಕೆಯಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಆರು ವಿಧಾನಸಭಾ ಸ್ಥಾನಗಳನ್ನು ಗೆದ್ದು ನಾಲ್ಕರಲ್ಲಿ ಮುನ್ನಡೆ ಸಾಧಿಸಿವೆ.
ಪಶ್ಚಿಮ ಬಂಗಾಳದ ರಾಯ್ಗಂಜ್, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆದಿದೆ. ಈ ಪೈಕಿ ನಾಲ್ಕು ರಾಜ್ಯಗಳನ್ನು ಇಂಡಿಯಾ ಒಕ್ಕೂಟ ಆಡಳಿತ ನಡೆಸುತ್ತಿದೆ. ಉಳಿದ ರಾಜ್ಯಗಳಲ್ಲಿ ಬಿಜೆಪಿ ಅಥವಾ ಎನ್ಡಿಎ ಸರ್ಕಾರ ಆಡಳಿತ ನಡೆಸುತ್ತಿದೆ.