ನವದೆಹಲಿ, ಜು. 1(DaijiworldNews/AK): ಲೋಕಸಭೆಯಲ್ಲಿ ಕಾಂಗ್ರೆಸ್ನ ಉಪನಾಯಕನಾಗಿ ಗೌರವ್ ಗೊಗೋಯ್ ನೇಮಕಗೊಂಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅಸ್ಸಾಂ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಪುತ್ರ ಗೌರವ್ ಗೊಗೋಯ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಮೂಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 2020ರಲ್ಲೂ ಕೂಡ ಗೌರವ್ ಗೊಗೋಯ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಗೌರವ್ ಗೊಗೋಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ. ಮುಖ್ಯ ಸಚೇತಕರಾಗಿ ಕೋಡಿಕುನ್ನಿಲ್ ಸುರೇಶ್ ಆಯ್ಕೆಯಾಗಿದ್ದಾರೆ. ಸಂಸದರಾದ ಮಾಣಿಕ್ಕಂ ಟ್ಯಾಗೋರ್ ಮತ್ತು ಎಂ.ಡಿ.ಜವೈದ್ ಅವರನ್ನು ಸಚೇತಕರನ್ನಾಗಿ ಮತ್ತು ಕೋಡಿಕುನ್ನಿಲ್ ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
ಜುಲೈ 14 ರಂದು ನಿರ್ಧಾರವನ್ನು ಪ್ರಕಟಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ಸಚೇತಕರ ನೇಮಕದ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. .