ಬೆಂಗಳೂರು, ಜು 16(DaijiworldNews/ AK): ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ 100% ಮೀಸಲಾತಿಗೆ ತೀರ್ಮಾನಿಸಿದ್ದು, ನಿಯಮ ಉಲ್ಲಂಘಿಸಿದರೆ 25 ಸಾವಿರ ರೂ. ತನಕ ದಂಡ ವಿಧಿಸುಲಾಗುವುದಕ್ಕೆ ಮುಂದಾಗಿದೆ.
ರಾಜ್ಯದ ಕೈಗಾರಿಕೆಗಳ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳ ಪಾಲಾಗುತ್ತಿರುವ ಆತಂಕ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದ ಭೂಮಿ, ಮೂಲಭೂತ ಸೌಕರ್ಯಗಳನ್ನ ಪಡೆದ ಕೈಗಾರಿಕೆಗಳಲ್ಲಿ, ಹಲವು ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಎದ್ದಿತ್ತು. ಹಾಗಾಗಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳು ಮತ್ತು ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ರಾಜ್ಯ ಮುಂದಾಗುತ್ತಿದೆ.
ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆ ಆಗಲಿದೆ. ಕಾರ್ಮಿಕ ಇಲಾಖೆಯಿಂದ ವಿಧೇಯಕ ಮಂಡನೆಗೆ ಮುಂದಾಗಿದ್ದು ಸಂಪುಟ ಸಭೆಯಲ್ಲೂ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದೆ.
ಮಸೂದೆಯಲ್ಲಿ ಪ್ರಮುಖವಾಗಿ ಆಡಳಿತಾತ್ಮಕ ಹುದ್ದೆಗೆ 50% (ಸೂಪರ್ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು) ಆಡಳಿತೇತರ ಹುದ್ದೆಗೆ 75%(ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ) ರಾಜ್ಯದ ಎಲ್ಲಾ ಕೈಗಾರಿಕೆಗಳಲ್ಲಿ ಸಿ, ಡಿ ದರ್ಜೆಗೆ 100% ಉಲ್ಲಂಘಿಸಿದರೆ 25 ಸಾವಿರ ರೂ ವರೆಗೆ ದಂಡ ಕನಿಷ್ಟ 10 ಸಾವಿರ ರೂ., ಗರಿಷ್ಟ 25 ಸಾವಿರ ರೂ. ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ಕೊಟ್ಟಿರುವುದನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.