ಕೋಲ್ಕತ್ತಾ, ಜು. 17(DaijiworldNews/AA): ಲೋಕಸಭೆಯಲ್ಲಿ ಬಹುಮತ ಕಳೆದುಕೊಂಡ ನಂತರ ಪಕ್ಷವು ಮುನ್ನಡೆಯಲು 'ಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್' ಎಂಬ ಹೊಸ ಘೋಷಣೆ ನೀಡಬೇಕು ಎಂದು ಬಂಗಾಳದ ವಿಪಕ್ಷ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದ ರಾಜ್ಯ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಘೋಷಣೆ ನಿಲ್ಲಿಸುವ ಸಮಯ ಬಂದಿದೆ ಎಂದು ಹೇಳಿದರು.
'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಎಂದು ನಮ್ಮ ನಾಯಕರು ಹೇಳುತ್ತಾರೆ. ಆದರೆ ನಾನು ಇನ್ಮುಂದೆ ಇದನ್ನ ಹೇಳಲ್ಲ. ಬದಲಿಗೆ ಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್' ಎಂದು ಹೇಳುತ್ತೇವೆ. 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಮತ್ತು ಅಲ್ಪಸಂಖ್ಯಾತ ಮೋರ್ಚಾ ಅಗತ್ಯವಿಲ್ಲ, ಎಂದರು.