ಬೆಂಗಳೂರು, ಜು. 17(DaijiworldNews/AK):ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಅಂತಲೂ ಬರೆದುಕೊಂಡಿದ್ದಾರೆ.