ಬೆಂಗಳೂರು, ಜು. 18(DaijiworldNews/AK): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಆದ್ರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು.