ಬೆಂಗಳೂರು, ಜು. 19(DaijiworldNews/AK):ಕರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು (ಜು.19) ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.. ಸದನ ಗದ್ದಲದ ನಡುವೆಯೇ ಸರ್ಕಾರ ಮೂರು ವಿಧೇಯಕಗಳನ್ನು ಮಂಡನೆ ಮಾಡಿತು.
2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ವಿಧಾನಮಂಡಲ (ಅನರ್ಹತಾ ನಿವಾರಣಾ) ವಿಧೇಯಕ, ಕರ್ನಾಟಕ ಸಿನಿ & ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ ಮಂಡಿಸಲಾಯಿತು.
ವಿಧೇಯಕ ಮಂಡನೆ ವೇಳೆ ವಿಪಕ್ಷಗಳು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದವು. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಣ ನುಗ್ಗಿದ ಸರ್ಕಾರದ ವಿರುದ್ಧ ದಿಕ್ಕಾರ ಅಂತ ವಿಪಕ್ಷಗಳು ಕೂಗಿದವು. ಜೊತೆಗೆ ಏನಿಲ್ಲ ಏನಿಲ್ಲ ಸರ್ಕಾರದ ಬಳಿ ಹಣವಿಲ್ಲ, ಶಾಸಕರಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಘೋಷಣೆ ಕೂಗಿದರು.