ಬೆಂಗಳೂರು, ಜು 22 (DaijiworldNews/ AK): ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಯಿತು.
ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ. ದರ್ಶನ್ ಪರ ವಕೀಲ ರಾಘವೇಂದ್ರ ಅವರು ವಾದ ಮಂಡಿಸಿದ್ದಾರೆ. ಆದರೆ ಕೊಲೆ ಆರೋಪಿಗೆ ಈ ಸೌಕರ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ಪೊಲೀಸರ ಪರ ವಕೀಲರಾದ ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರು ಆದೇಶ ಕಾಯ್ದಿರಿಸಿದ್ದಾರೆ. ಜು.25ರಂದು ತೀರ್ಪು ಬರಲಿದೆ.
ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ದರ್ಶನ್ ಪರ ಮತ್ತು ಪೊಲೀಸರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಜುಲೈ 25 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದರು.