ಬೆಂಗಳೂರು, ಜು 22 (DaijiworldNews/AK): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿದೆ. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು.
ಆದರೆ ಈ ವರೆಗೂ, ಪಕ್ಷವು ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ. ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ.