ನವದೆಹಲಿ, ಜು.23(DaijiworldNews/AA): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಈ ಬಾರಿಯ ಬಜೆಟ್ ನಲ್ಲಿ 3 ಲಕ್ಷ ಕೋಟಿಗೂ ಅಧಿಕ ಹಣ ಮೀಸಲಿಡಲಾಗಿದೆ. ಜೊತೆಗೆ ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಘೋಷಿಸಲಾಗಿದೆ.
ಬಜೆಟ್ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು. ಇದರೊಮದಿಗೆ ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ ಗಳನ್ನು ನಿರ್ಮಿಸಲಿದೆ ಎಂದು ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಉದ್ಯೋಗ, ಕೌಶಲ್ಯ, ಎಂಎಸ್ಎಂಇಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್ ಕೇಂದ್ರೀಕರಿಸುತ್ತದೆ. ಮಧ್ಯಂತರ ಬಜೆಟ್ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.