ಚಿಕ್ಕಬಳ್ಳಾಪುರ, ಜು 24 (DaijiworldNews/MS): ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ನಜೀರ್ ಅಹ್ಮದ್ (60) ಕೊಲೆಯಾದ ದುರ್ದೈವಿ. ಬಶೀರ್ ಅಹ್ಮದ್ (66) ಪಿಸ್ತೂಲ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ.
ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡ ಮಾಬೂಸಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಬಶೀರ್ ಅಹ್ಮದ್ ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ನಮಾಜ್ ಗೆ ತೆರಳುವ ವೇಳೆ ದುರಂತ ನಡೆದಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ