ಬೆಂಗಳೂರು, ಜು 24(DaijiworldNews/ AK): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ಇದ್ದಾರೆ.
ಜುಲೈ 23 ನಿನ್ನೆ ಸಹೋದರ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇಂದು ಪ್ರಜ್ವಲ್ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಕೋರ್ಟ್, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.ಇದೀಗ ಹೈಕೋರ್ಟ್ ಮೆಟ್ಟಿಲೇರುವ ಅನಿವಾರ್ಯತೆ ಎದುರಾಗಿದೆ.