ಲಕ್ನೋ, ಜು 27(DaijiworldNews/MS): ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಸುಲ್ತಾನ್ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾಗಿದ್ದರು.
“ನಾನು ಯಾವುದೇ ಮಾನಹಾನಿಕರ ಹೇಳಿಕೆ ನೀಡಿಲ್ಲ. ಕೀಳುಮಟ್ಟದ ಪ್ರಚಾರ ಪಡೆಯುವ ಸಲುವಾಗಿ ನನ್ನ ವಿರುದ್ಧ ಕೇಸು ದಾಖಲಿಸಲಾಗಿದೆ’ ಎಂದು ಅವರು ಕೋರ್ಟ್ ಮುಂದೆ ಹೇಳಿದರು. ವಿಚಾರಣೆಯನ್ನು ಆ.12ಕ್ಕೆ ಮುಂದೂಡಿದ ನ್ಯಾಯಾಲಯ, ಅಂದು ಖುದ್ದು ಹಾಜರಾತಿಯಿಂದ ರಾಹುಲ್ಗೆ ವಿನಾಯಿತಿ ನೀಡಿದರು. ಮಧ್ಯಪ್ರದೇಶ ಬಿಜೆಪಿಯ ಸ್ಥಳೀಯ ನಾಯಕ ವಿಜಯ್ ಮಿಶ್ರಾ ಅವರು 2018ರ ಆ.04ರಂದು ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.