ಬೆಂಗಳೂರು, ಜು.27(DaijiworldNews/AA): ಇತ್ತೀಚೆಗಷ್ಟೇ ತೈಲ ಬೆಲೆ ಏರಿಕೆ ಮಾಡಲಾಗಿತ್ತು. ಈ ಶಾಕ್ ಇಂದ ಜನತೆ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಲು ಕೆಎಸ್ಆರ್ಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಬಸ್ ಪ್ರಯಾಣ ದರ 15% ರಿಂದ 20% ವರೆಗೆ ಏರಿಕೆ ಮಾಡಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಬಂದಿದೆ. ನಾನಿನ್ನೂ ಅದನ್ನ ನೋಡಿಲ್ಲ. ದರ ಏರಿಕೆ ಮಾಡುವ ಬಗ್ಗೆ ಸಧ್ಯಕ್ಕೆ ಯಾವುದೇ ನಿರ್ಧಾರವಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಬಾರಿಯ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ದಿನದಿಂದ ಬಿಜೆಪಿ ಅನ್ಯಾಯ ಆಗುತ್ತಿದೆ. ರಾಜ್ಯಕ್ಕೆ ಕಾಯಂ ಆಗಿ ಚೊಂಬು ಸಿಗುತ್ತಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಆಯ್ಕೆ ಆಗಿದ್ದರೂ ಕೃತಜ್ಞತೆ ಇಲ್ಲ. ನರೇಂದ್ರ ಮೋದಿ ಏನ್ ಮಾಡಿಲ್ಲ ಅಂದರೂ 19 ಜನರನ್ನು ಜನ ಸಂಸದರನ್ನ ಆಯ್ಕೆ ಮಾಡಿ ಕಳಿಸಿದ್ದಾರೆ ಇದು ದುರದೃಷ್ಟಕರ ಎಂದರು.